ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪ್ರೌಢಶಾಲೆ ಶಿಕ್ಷಕರ ನೇಮಕಾತಿ ವಯೋಮಿತಿ 2 ವರ್ಷ ಹೆಚ್ಚಳ
ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್:
ಪ್ರೌಢಶಾಲೆ ಶಿಕ್ಷಕರ ನೇಮಕಾತಿ
ವಯೋಮಿತಿ 2 ವರ್ಷ ಹೆಚ್ಚಳ
17 Feb 23 . 6:01 AM
ಬೆಂಗಳೂರು: ಪ್ರೌಢಶಾಲೆ ಶಿಕ್ಷಕರ ನೇಮಕಾತಿ
ವಯೋಮಿತಿ ಎರಡು ವರ್ಷ ಹೆಚ್ಚಳ ಮಾಡಲಾಗುವುದು
ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ
ಬಿ.ಸಿ. ನಾಗೇಶ್ ಹೇಳಿದ್ದಾರೆ.
ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ
ಸಿಬ್ಬಂದಿ ಹುದ್ದೆ ಬರ್ತಿಗೆ ಎರಡು ವರ್ಷ ವಯೋಮಿತಿ
ಹೆಚ್ಚಳದ ಸಂಬಂಧ ಪ್ರಸ್ತಾವನೆ ಸ್ವೀಕೃತವಾಗಿದ್ದು,
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಜತೆ
ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು
ಎಂದು ಹೇಳಿದ್ದಾರೆ.