ರಾಜಹಂಸಗಢದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ
ಬೆಳಗಾವಿ:
ದೇಶದ ಅದ್ವಿತೀಯ ನಾಯಕ, ಹಿಂದೂ ಧರ್ಮದ ರಕ್ಷಣೆಗಾಗಿ ಕೆಚ್ಚೆದೆಯಿಂದ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪಿಸುತ್ತಿರುವುದು ಸಂತಸ ತಂದಿದೆ.ರಾಜಹಂಸಗಡ ಕೋಟೆಯ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಆರ್ಐಡಿಎಲ್, ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಗುರುವಾರ (ಮಾರ್ಚ್ 2) ರಾಜಹಂಸಗಡ ಕೋಟೆ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣಗೊಳಿಸಿ ಅವರು ಮಾತನಾಡಿದರು.
ಈ ಅನುದಾನದಲ್ಲಿ ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ ಸಮುದಾಯ ಭವನ, ತಂಗುದಾಣ ಮತ್ತಿತರ ಮೂಲ ಸೌಕರ್ಯಗಳನ್ನು ನಿರ್ಮಿಸಿ ಪ್ರವಾಸಿ ತಾಣವನ್ನಾಗಿ ಪರಿವರ್ತಿಸಲಾಗುವುದು ಎಂದರು.
ಸಂಜಯ ಪಾಟೀಲ ಅವರ ಪ್ರಯತ್ನದಿಂದ ಕೋಟೆ ಪ್ರದೇಶದಲ್ಲಿ ಮೂಲಸೌಕರ್ಯ ಕಲ್ಪಿಸಲು ಅನುದಾನ ಘೋಷಿಸಲಾಯಿತು.
ಕೋಟೆ ಅಭಿವೃದ್ಧಿಗೆ ಈಗಾಗಲೇ ಮೀಸಲಿಟ್ಟಿರುವ ಅನುದಾನಕ್ಕೆ ಹೆಚ್ಚುವರಿಯಾಗಿ 5 ಕೋಟಿ ಅನುದಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ರಾಜಹಂಸ ಒಂದು ಅದ್ಭುತ ಕೋಟೆ.ಈ ಕೋಟೆಯು ಶಿವಾಜಿ ಮಹಾರಾಜರ ಗತಕಾಲದ ವೈಭವ ಮತ್ತು ಸಂಸ್ಕೃತಿಯನ್ನು ಕಾಪಾಡುತ್ತದೆ.ಶಿವಾಜಿ ಮಹಾರಾಜರ ವ್ಯಕ್ತಿತ್ವಕ್ಕೆ ಅನುಗುಣವಾಗಿ ವಿಗ್ರಹವನ್ನು ಸ್ಥಾಪಿಸಲಾಗಿದೆ.
ಮುಂದಿನ ದಿನಗಳಲ್ಲಿ ಕೋಟೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.