ಬಿಜೆಪಿ ಭಿನ್ನಮತ ಶಮನಕ್ಕೆ ಯತ್ನ, ಬೆಳಗಾವಿ ಯಲ್ಲಿ ಸಭೆ ನಡೆಸಿದ ಧರ್ಮೇಂದ್ರ ಪ್ರಧಾನ
ಬೆಳಗಾವಿ:
ಬೆಳಗಾವಿಗೆ ಆಗಮಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧ ಅವರನ್ನು ಶಾಸಕ ಅನಿಲ ಬೆನಕೆ ಸ್ವಾಗತಿಸಿದರು.ಜಿಲ್ಲೆಯಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.
ನಗರಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯ ಚುನಾವಣೆ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಭಾನುವಾರ ಬಾಗಲಕೋಟೆ, ಬೆಳಗಾವಿ, ಹಾಗೂ ವಿಜಯಪುರ ಜಿಲ್ಲೆಗಳ ಆಯ್ದ ಸಂಸದರು, ಶಾಸಕರೊಂದಿ ಪ್ರತ್ಯೇಕವಾಗಿ ಸಭೆ ನಡೆಸಿದರು.
‘ಪಕ್ಷದ ಕೆಲವು ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ. ಹಾಗಾಗಿ ಪ್ರಧಾನ ಪ್ರತ್ಯೇಕವಾಗಿ ನಾಯಕರ ಸಭೆ ನಡೆಸಿ, ಭಿನ್ನಮತ ಶಮನಗೊಳಿಸಲು ಪ್ರಯತ್ನಿಸಿದರ ಎಲ್ಲರೂ ಒಂದಾಗಿ ಹೋಗುವಂತೆ ಸೂಚಿಸಿದರು’.
ಮೂರೂ ಜಿಲ್ಲೆಗಳ ನಾಯಕರ ಸಮಗ್ರ ಮಾಹಿತಿ ಪಡೆದುಕೊಂಡ ಪ್ರಧಾನ, ‘ಬೆಳಗಾವಿ ಜಿಲ್ಲೆಗೆ ಶೀಘ್ರ ಬಂದ ಮತ್ತೊಂದು ಹಂತದ ಸಭೆ ನಡೆಸುತ್ತೇನೆ ಎಂದು ತಿಳಿಸಿದ್ದಾ ಎಂದು ಹೇಳಿವೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನಮ್ಮ ಕ್ಷೇತ್ರಗಳ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಬೆಳಗಾವಿ ಜಿಲ್ಲೆಯ ಹಲವು ಶಾಸಕರು ಒತ್ತಾಯಿಸಿದರು ಎನ್ನಲಾಗಿದೆ.
ಈ ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಸಂಸದರಾದ ಪಿ.ಸಿ.ಗದ್ದಿಗೌಡರ, ರಮೇಶ ಜಿಗಜಿಣಗಿ, ಈರಣ್ಣ ಕಡಾಡಿ, ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮತ್ತಿತರರು ಭಾಗವಹಿಸಿದ್ದರು.