ಬೆಳಗಾವಿ, ಜೂನ್ 18: ಜಿಲ್ಲಾಧಿಕಾರಿ ಕಚೇರಿ ಆವರಣದ ಮುಂಭಾಗದಲ್ಲಿ ಇಂದು ಮಧ್ಯಾಹ್ನ ಎರಡು ಗುಂಪುಗಳ ಯುವಕರ ನಡುವೆ ನಡೆದ ಗಲಾಟೆ ವೇಳೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆದ ಘಟನೆ ಆತಂಕಕ್ಕೆ ಕಾರಣವಾಗಿದೆ.
ಮಾಹಿತಿಯ ಪ್ರಕಾರ, ಕಲೆಕ್ಟರ್ ಕಚೇರಿ ಎದುರು ಎರಡು ಗುಂಪುಗಳ ಯುವಕರ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಈ ವೇಳೆ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಯತ್ನಿಸಿದ ಮಾರುಕಟ್ಟೆ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಮಲ್ಲಿಕಾರ್ಜುನ ಗುಂಜಿಕರ್ ಅವರ ಮೇಲೆ ಕೆಲ ಯುವಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾರುಕಟ್ಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಘಟನೆಯ ಹಿನ್ನೆಲೆಯಲ್ಲಿ ಎರಡೂ ಗುಂಪುಗಳಿಗೆ ಸೇರಿದ ಕೆಲ ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಲ್ಲದೆ, ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಘಟನೆಯಿಂದ ಕೆಲಕಾಲ ಕಲೆಕ್ಟರ್ ಕಚೇರಿ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೂ, ಪೊಲೀಸರ ತ್ವರಿತ ಮತ್ತು ಪರಿಣಾಮಕಾರಿ ಕ್ರಮದಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಮುಂದಿನ ಕಾನೂನು ಕ್ರಮ ಜರುಗುತ್ತಿ
ದೆ.
