ಸಚಿವ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
ಸಚಿವ ಲಿಂಬಾವಳಿ ಹೆಸರು
ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು:
ಸಚಿವ ಅರವಿಂದ್ ಲಿಂಬಾವಳಿ ಸೇರಿ ಆರು ಜನರ ಹೆಸರು ಬರೆದಿಟ್ಟು ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಘಟನೆ ನಡೆದಿದೆ.
47 ವರ್ಷದ ಪ್ರದೀಪ್ ಕಾರ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೆಚ್‌ಎಸ್‌ಆರ್ ಲೇಔಟ್ ನಿವಾಸಿಯಾಗಿರುವ ಪ್ರದೀಪ್, ಮಾಜಿ
ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರನ್ನು ಡೆತ್ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.