ನಾಳೆ ಸಾರಿಗೆ ನೌಕರರ
ಮುಷ್ಕರ; ರಾಜ್ಯದಾದ್ಯಂತ
ಬಸ್ ಸಂಚಾರದಲ್ಲಿ ವ್ಯತ್ಯಯ
ಸಾಧ್ಯತೆ
ಬೆಂಗಳೂರು :
ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಒತ್ತಾಯಿಸಿ ನಾಳೆ ಸಾರಿಗೆ ನೌಕರರು ರಾಜ್ಯದಾದ್ಯಂತ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
6 ವರ್ಷಗಳು ಕಳೆದರೂ ಸಾರಿಗೆ ನೌಕರರಿಗೆ ಸರ್ಕಾರ ವೇತನ ಹೆಚ್ಚಳ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅದರಂತೆ ಜನವರಿ 24ರಂದು ಅಂದರೆ ನಾಳೆ ಸಾರಿಗೆ ನೌಕರರು ಸರ್ಕಾರದ ಗಮನ ಸೆಳೆಯಲು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಹೀಗಾಗಿ ಮಂಗಳವಾರ ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ.