ಲಕ್ಷ್ಮಿ ಹೆಬ್ಬಾಳ್ಕರ್ ರಮೇಶ್ ಜಾರಕಿಹೊಳಿ ಶಾಕ್

ಲಕ್ಷ್ಮಿ ಹೆಬ್ಬಾಳ್ಕರ್ ರಮೇಶ್ ಜಾರಕಿಹೊಳಿ ಶಾಕ್

ಬೆಳಗಾವಿ:

ತಾಲೂಕಿನ ಗ್ರಾಮೀಣ ಮತಕ್ಷೇತ್ರದಲ್ಲಿರುವ ರಾಜಹಂಸಗಡ ಕೋಟೆಯಲ್ಲಿ(Rajhansgad Fort) ನಿರ್ಮಾಣವಾಗಿದ್ದ ಶಿವಾಜಿ(Chhatrapati Shivaji Maharaj)ಪ್ರತಿಮೆ ಲೋಕಾರ್ಪಣೆಗೆ ದಿನಾಂಕ ನಿಗದಿ ಮಾಡಲಾಗಿದೆ.ಮಾರ್ಚ್ 2ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಲೋಕಾರ್ಪಣೆ ಮಾಡಿಸಲು ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಮುಂದಾಗಿದ್ದು ಶಾಸಕಿ ಲಕ್ಷ್ಮಿ  ಹೆಬ್ಬಾಳ್ಕರ್  ಗೆ (Lakshmi Hebbalkar) ಶಾಕ್ ನೀಡಿದ್ದಾರೆ.

ಮಾರ್ಚ್ 5ರಂದು ಶಿವಾಜಿ ಪ್ರತಿಮೆ ಲೋಕಾರ್ಪಣೆಗೆ ಹೆಬ್ಬಾಳ್ಕರ್ ನಿರ್ಧರಿಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ವಿಪಕ್ಷ ನಾಯಕ ಸಿದ್ದರಾಮಯ್ಯಗೆ (Siddaramaiah)ಆಹ್ವಾನಿಸಲು ಲಕ್ಷ್ಮಿ ಹೆಬ್ಬಾಳ್ಕರ್ ನಿರ್ಧಾರ ಮಾಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು. ಇದನ್ನೂ ಮಾಧ್ಯಮ ಪ್ರಕಟಣೆ ನೋಡಿ ಸಿಡಿದೆದ್ದಿದ್ದ ರಮೇಶ್ಜಾ ರಕಿಹೊಳಿ, ಇತರ ಬಿಜೆಪಿ ನಾಯಕರು ಶಿಷ್ಟಾಚಾರ ಪ್ರಕಾರ ಸರ್ಕಾರದ ವತಿಯಿಂದ ಪ್ರತಿಮೆ ಲೋಕಾರ್ಪಣೆಗೆ ಪಟ್ಟು ಹಿಡಿದಿದ್ದರು, ಈಗ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ರಾಜಹಂಸಗಡದ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಲೋಕಾರ್ಪಣೆಗೆ ನಿರ್ಧಾರ ಮಾಡಲಾಗಿದೆ.

ಸಿಎಂ ಕೈಯಿಂದಲೇ ಶಿವಾಜಿ ಪ್ರತಿಮೆ ಲೋಕಾರ್ಪಣೆ ಹಠಕ್ಕೆ ಬಿದ್ದಿದ್ದ ಗೋಕಾಕ್ಸಾ  ಹುಕಾರ್ ಮಾರ್ಚ್ 2ರಂದು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆಗೆ ಸಿದ್ಧತೆ ಮಾಡಿದ್ದಾರೆ. ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೇರಿ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *

Previous post आमदार अभय पाटील यांचा सल्ला, वेगळा आणि सार्थक!, मंत्री शोभा करंदलाजे यांच्या कडून कौतुक
Next post पंतप्रधानांच्या दौऱ्याबाबत पूर्वतयारी जोरात….दक्षिण बेळगाव सजले….