ಬಿಜೆಪಿಯ ಬೆಳಗಾವಿ ಮಹಾನಗರ ಮತ್ತು ಬೆಳಗಾವಿ ಗ್ರಾಮಾಂತರ ಜಿಲ್ಲೆಯ ವತಿಯಿಂದ ನಗರದಲ್ಲಿ ವಿಜಯೋತ್ಸವದ ಸಂಭ್ರಮ
ಬೆಳಗಾವಿ:
ಕಿತ್ತೂರು ಚನ್ನಮ್ಮ ವೃತ್ತದ ಹತ್ತಿರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.ಇದೀಗ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ಮೂರೂ ರಾಜ್ಯಗಳಲ್ಲಿ ಬಿಜೆಪಿ ತನ್ನ ಅಧಿಕಾರವನ್ನು ಸ್ಥಾಪಿಸಿದೆ.
ಇತ್ತೀಚೆಗೆ ನಡೆದ ಮೂರು ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಶಸ್ವಿಯಾಗಿದೆ.ಮಹಾನಗರ ಬಿಜೆಪಿ ವತಿಯಿಂದ ನಗರದಲ್ಲಿ ವಿಜಯೋತ್ಸವ ಆಚರಿಸಲಾಯಿತು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮುಖಂಡರು ತಮ್ಮ ಅಭಿಪ್ರಾಯ ಮಂಡಿಸಿದರು.
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಇದೇ ರೀತಿಯ ಯಶಸ್ಸನ್ನು ಸಾಧಿಸಲಿದೆ ಎಂಬ ನಂಬಿಕೆಯೂ ವ್ಯಕ್ತವಾಗಿದೆ.
ಈ ವಿಜಯೋತ್ಸವ ಕಾರ್ಯಕ್ರಮದಲ್ಲಿ ಗ್ರಾಮಾಂತರ ಅಧ್ಯಕ್ಷರಾದ, ಶ್ರೀ. ಸಂಜಯ ಪಾಟೀಲ, ಮಹಾನಗರ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಶ್ರೀ. ದಾದಾಗೌಡ ಬಿರಾದಾರ, ಶ್ರೀ. ಮುರಗೇಂದ್ರಗೌಡ ಪಾಟೀಲ, ಉತ್ತರ ಮಂಡಲ ಅಧ್ಯಕ್ಷರಾದ ಶ್ರೀ. ವಿಜಯ ಕೊಡಗಾನೂರ, ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನೋದ ಲಂಗೋಟಿ,ಮಾಧ್ಯಮ ಪ್ರಮುಖರು. ಶ್ರೀ.ಶರದ ಪಾಟೀಲ, ಶ್ರೀ. ಪ್ರಜ್ವಲ ಅಥಣಿಮಠ, ಹಾಗೂ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.