ಕರ್ನಾಟಕ ವಿಧಾನಸಭೆ ಚುನಾವಣೆ: 80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರು ಮನೆಯಿಂದಲೇ ಮತ ಚಲಾಯಿಸಲು ವ್ಯವಸ್ಥೆ!

ಕರ್ನಾಟಕ ವಿಧಾನಸಭೆ ಚುನಾವಣೆ: 80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರು ಮನೆಯಿಂದಲೇ ಮತ ಚಲಾಯಿಸಲು ವ್ಯವಸ್ಥೆ!

ಬೆಂಗಳೂರು:

ಇದೇ ಮೊದಲ ಬಾರಿಗೆ 80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರೂ ಮನೆಯಿಂದಲೇ ಮತದಾನ ಮಾಡಲು ಬಯಸಿದರೆ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆ ಕುರಿತು ಮಾಹಿತಿ ನೀಡಿದ ಅವರು, ಕಳೆದ ಮೂರು ದಿನಗಳಿಂದ ರಾಜಕೀಯ ಪಕ್ಷಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಜಿಲ್ಲಾಧಿಕಾರಿ ಹಾಗೂ ಪಂಚಾಯಿತಿ ಮುಖ್ಯ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಅಗತ್ಯಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಇದೇ ಮೊದಲ ಬಾರಿಗೆ, ರಾಜ್ಯದಲ್ಲಿ ಎಲ್ಲಾ 80 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ವಿಶೇಷ ಮತದಾರರು ಬಯಸಿದಲ್ಲಿ ಅವರ ಮನೆಯಿಂದಲೂ ಮತದಾನ ಮಾಡುವ ಸೌಲಭ್ಯ ಒದಗಿಸಲಿದ್ದೇವೆ. ಅಧಿಸೂಚನೆ ಹೊರಡಿಸಿದ 5 ದಿನಗಳೊಳಗೆ ಫಾರ್ಮ್ 12 ಡಿ ಲಭ್ಯವಿರುತ್ತದೆ. ಇದರಿಂದ 80 ವರ್ಷಕ್ಕೂ ಮೇಲ್ಪಟ್ಟವರು ಅಥವಾ ವಿಶೇಷ ಚೇತನ ಮತದಾರರು ಮನೆಯಿಂದಲೇ ತಮ್ಮ ಹಕ್ಕು ಚಲಾಯಿಸಬಹುದು ಎಂದರು.

ಮೇ 24ಕ್ಕೆ ಹಾಲಿ ಸರ್ಕಾರದ ಅವಧಿ ಅಂತ್ಯವಾಗಲಿದ್ದು, ಅದಕ್ಕೂ ಮುಂಚಿತವಾಗಿ ಚುನಾವಣೆ ಮುಗಿಸಬೇಕಾಗಿದೆ. ರಾಜ್ಯದಲ್ಲಿ ಒಟ್ಟು 58, 282 ಮತಗಟ್ಟೆ ಸ್ಥಾಪಿಸಲಾಗುವುದು, ಒಂದು ಮತಗಟ್ಟೆಯಲ್ಲಿ 883 ಜನರು ಮತ ಚಲಾಯಿಸಬಹುದಾಗಿದ್ದು, ನಗರ ಪ್ರದೇಶದಲ್ಲಿ 24, 063 ಮತಗಟ್ಟೆ ಸ್ಥಾಪಿಸಲಾಗುವುದು, ಒಟ್ಟು 22, 73, 579 ಮತದಾರರಿದ್ದು ವಿಶೇಷ ಚೇತನರಿಗೆ ವೀಲ್ಸ್ ಚೇರ್ ಸೇರಿದಂತೆ ಮತದಾನಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

Previous post ಶಾ.ಅಭಯ ಪಾಟೀಲರ ಪರಿಕಲ್ಪನೆಯಿಂದ ಸಾಕಾರಗೊಂಡ “ಶಿವಚರಿತ್ರೆ” ಯೋಜನೆ ಮಾರ್ಚ್ 16ರಂದು ಲೋಕಾರ್ಪಣೆ.
Next post बेळगावजवळील हॉटेल कर्मचाऱ्यांकडून ग्राहकांवर प्राणघातक हल्ला: पोलीस स्थानकात तक्रार दाखल