ರಾಹುಲ್ ಗಾಂಧಿ 20 ಮಾರ್ಚ ರಂದು ಬೆಳಗಾವಿಗೆ
ಬೆಳಗಾವಿ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾರ್ಚ್ 20ರಂದು ನಗರಕ್ಕೆ ಆಗಮಿಸಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಮಾರ್ಚ್ 16ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಸಭೆಯಲ್ಲಿ ಬೆಳಗಾವಿ ವಿಭಾಗದ ಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿದೆ.
‘ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಮುಖಂಡರು, 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಈ ಸಭೆಯಲ್ಲಿ ಭಾಗವಹಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾರ್ಚ್ 18, 19ರಂದು ಬೆಳಗಾವಿ ಜಿಲ್ಲೆಯಲ್ಲಿ ನಡೆಯಬೇಕಿದ್ದ ‘ಪ್ರಜಾಧ್ವನಿ’ ಯಾತ್ರೆಯನ್ನು ರಾಹುಲ್ ಗಾಂಧಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.