ಇಂದು ಬೆಳಗಾವಿಗೆ ರಾಹುಲ್ ಗಾಂಧಿ : ಯಾಕೆ ಗೊತ್ತಾ?
ಇಂದು ಬೆಳಗಾವಿಗೆ ರಾಹುಲ್ ಗಾಂಧಿ : ಯಾಕೆ ಗೊತ್ತಾ?
ಬೆಳಗಾವಿ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿಯಲ್ಲಿ ಯುವ ಕ್ರಾಂತಿ ರ್ಯಾಲಿ ನಡೆಯಲಿದ್ದು, ಭಾರತ್ ಜೋಡೋ ಯಾತ್ರೆಯ ಭರ್ಜರಿ ಯಶಸ್ಸಿನ ನಂತರ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಳಗಾವಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ,ಈ ಮೂಲಕ ವಿಧಾನಸಭೆ ಚುನಾವಣೆ ಅಖಾಡಕ್ಕೆ ಧುಮುಕಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದ್ದಾರೆ.ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಕಾಂಗ್ರೆಸ್ ಮೂರು ಪ್ರಮುಖ ಭರವಸೆ ನೀಡಿದ್ದು, ಯುವಕರಿಗೆ ನಾಲ್ಕನೇ ಗ್ಯಾರಂಟಿ ಯೋಜನೆ ಘೋಷಣೆ ಮಾಡುವ ಸಾಧ್ಯತೆ ಇದೆ.