ಕೋಲಾರ ಜಿಲ್ಲೆಯಿಂದ ಸ್ಪರ್ಧಿಸುತ್ತೇನೆ : ಸಿದ್ದರಾಮಯ್ಯ ಘೋಷಣೆ
ಕೋಲಾರ ಜಿಲ್ಲೆಯಿಂದ ಸ್ಪರ್ಧಿಸುತ್ತೇನೆ : ಸಿದ್ದರಾಮಯ್ಯ ಘೋಷಣೆ
ಕೋಲಾರ :
2023ರ ಮುಂಬರುವ ವಿಧಾನಸಭಾ ಚುನಾವಣೆಗೆ ಕೋಲಾರ ಜಿಲ್ಲೆಯಿಂದ ಸ್ಪರ್ಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ಕೋಲಾರ ಜಿಲ್ಲೆಗೆ ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಕೋಲಾರ ಜಿಲ್ಲೆಯಿಂದ ಮುಂದಿನ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಬಹಿರಂಗವಾಗಿ ತಿಳಿಸಿದ್ದಾರೆ.
ನಿಮ್ಮ ಪ್ರೀತಿ ಅಭಿಮಾನ ತಿರಸ್ಕರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಮಾತುಗಳನ್ನು ಕೇಳಿದ ಬಳಿಕ ಕ್ಷೇತ್ರ ಘೋಷಣೆ ಬೆನ್ನಲ್ಲೆ ಜೈಕಾರ ಕೇಳಿಬಂದಿದೆ.